ಗೃಹಲಕ್ಷ್ಮೀ ಹಣ ಯಾರಿಗೆ ಜಮೆ? ಯಾರಿಗೆ ಜಮೆಯಾಗಲ್ಲ?

Written by Ramlinganna

Updated on:

Who get gruhalakshm money ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿಕೊಂಡವರಿಗೆ ಯಾರಿಗೆ ಹಣ ಜಮೆಯಾಗುತ್ತದೆ? ಯಾರಿಗೆ ಜಮೆಯಾಗಲ್ಲ ಇಲ್ಲಿದೆ ಮಾಹಿತಿ.

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮೊದಲು ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿತ್ತು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿದೆ. ಈ ಯೋಜನೆಗಳಡಿಯಲ್ಲಿ ಕರ್ನಾಟಕದ ಜನತೆ ಸೌಲಭ್ಯ ಪಡೆಯುತ್ತಿದ್ದಾರೆ.

ಆದರೆ ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿದವರಲ್ಲಿ ಕೆಲವರಿಗೆ ಎರಡು ಕಂತಿನ ಹಣ ಜಮೆಯಾದರೆ ಇನ್ನೂ ಕೆಲವರಿಗೆ ಹಣ ಜಮೆಯಾಗಿಲ್ಲ. ಹೌದು ಯೋಜನೆಯಡಿ ಸೌಲಭ್ಯ ಪಡೆಯಲು ನೋಂದಣಿ ಮಾಡಿಸಿದವರಲ್ಲಿ ಕೆಲವರಿಗೇಕೆ ಹಣ ಜಮೆಯಾಗುತ್ತಿಲ್ಲ ಎಂಬುದರ ಮಾಹಿತಿ ಇಲ್ಲಿದೆ.

Who get gruhalakshm money ಯಾರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲ್ಲ?

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿದ ಮಾತ್ರಕ್ಕೆ ಯೋಜನೆಯ ಹಣ ಜಮೆಯಾಗಲ್ಲ. ನೋಂದಣಿ ಮಾಡಿಸುವದರ ಜೊತೆಗೆ ಅರ್ಹತೆ ಪಡೆದಿರಬೇಕು. ಹಾಗಾದರೆ ಅರ್ಹತೆಗಳು ಯಾವುವು?   ಎಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಗೃಹಲಕ್ಷ್ಮೀ ಯೋಜನೆಗೆ ನಂದಣಿ ಮಾಡಿಸಿದವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯುಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುುಟಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯವಾಗುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿಗೆ ಹೋಗಲು ದಾರಿಯಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರಬೇಕು. ಅರ್ಜಿಯಲ್ಲಿ ತಪ್ಪು ಮಾಹಿತಿಗಳನ್ನು ನೀಡಿದಲ್ಲಿ ಸೌಲಭ್ಯ ದೊರೆಯುವುದಿಲ್ಲ. ಈ ಯೋಜನೆಯ ಸೌಲಭ್ಯ ಪಡೆಯಲುಫಲಾನುಭವಿಯ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಜೋಡಣೆ ಮಾಡಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅವರಿಗೆ ಯೋಜನೆಯ ಹಣ ಜಮೆಯಾಗುವುದಿಲ್ಲ.

ನಿಮ್ಮ ರೇಶನ್ ಕಾರ್ಡ್ ನಲ್ಲಿಯಾರಿಗೆ ಕುಟುಂಬದ ಯಜಮಾನಿ ಎಂದು ನಮೂದಿಸಲಾಗಿದೆ?

ನಿಮ್ಮ ರೇಶನ್ ಕಾರ್ಡ್ ನಲ್ಲಿ ಯಾರಿಗೆ ಕುಟುಂಬದ ಯಜಮಾನಿ ಎಂದು ನಮೂದಿಸಲಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://ahara.kar.nic.in/Home/EServices

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವ ಮೂರು ಗೆರೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಇ ರೇಶನ್ ಕಾರ್ಡ್ ಮೇಲೆ ಕ್ಲಿಕ್ ಮಾಡಬೇಕು.ನಂತರ ಶೋ ವಿಲೇಜ್ ಲಿಸ್ಟ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ರೇಶನ್ ಕಾರ್ಡ್ ಹೊಂದಿರುವವರ ಹೆಸರು ಕಾಣಿಸುತ್ತದೆ. ಅಲ್ಲಿ ರೇಶನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನಿ ಯಾರೆಂದು ನಮೂದಿಸಲಾಗಿರುತ್ತದೆ.

ಅತೀ ಶೀಘ್ರದಲ್ಲಿ ಮೂರನೇ ಕಂತಿನ ಹಣ ಬಿಡುಗಡೆ

ಅತೀ ಶೀಘ್ರದಲ್ಲಿ ಗೃಹಲಕ್ಷ್ಮೀ ಯೋಜನೆಯ 8ನೇ ಕಂತಿನ ಹಣ ರಾಮನಗರಕ್ಕೆ ಬಿಡುಗಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಮನಗರ ಉಪನಿರ್ದೇಶಕ ಪ್ರಸನ್ನಕುಮಾರ ತಿಳಿಸಿದ್ದಾರೆ. ಕಳೆದ ಎರಡು ಕಂತಿನಲ್ಲಿಹಣಬಾರದ ಫಲಾನುಭವಿಗಳಿಗೆ ಈ ಕಂತಿನಲ್ಲಿ ಹಣ ಬಿಡುಗಡೆಯಾಗಲಿದೆ. ತಾಂತ್ರಿಕ ದೋಷದಿಂದಾಗಿ ಹಣ ಸಂದಾಯವಾಗಿರಲಿಲ್ಲ ಎಂದು ಹೇಳಿದ್ದಾರೆ  ಅರ್ಹತೆ ಹೊಂದಿದವರೆಲ್ಲರಿಗೂ ಹಣ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Comment