ಬೆಳೆ ವಿಮೆ ಜಮೆಯಾಗಿಲ್ಲವೇ? ಪ್ರಸ್ತಾವನೆಗೆ ಅರ್ಜಿ ಸಲ್ಲಿಸಿ ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಿ

Written by Ramlinganna

Published on:

ಮುಂಗಾರು ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ನಂತರ ವಿಮೆ ಜಮೆಯಾಗಿಲ್ಲದ ರೈತರು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಲು ಅರ್ಜಿ ಕರೆಯಲಾಗಿದೆ.

ಹೌದು, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ.

ಬೀದರ್ ಜಿಲ್ಲೆಯ ರೈತರು ಬೆಳೆ ವಿಮೆ ಮಾಡಿಸಿ ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪರಿಶೀಲಿಸಲಾಗಿ ಮುಂಗಾರು ಹಂಗಾಮಿನಲ್ಲಿ ತಿರಸ್ಕೃತಗೊಂಡ 16, ಹಿಂಗಾರು ಹಂಗಾಮಿನಲ್ಲಿ 2 ಪ್ರಸ್ತಾವನೆಗಳನ್ನು ಈಗಾಗಲೇ ರೈತ ಸಂಪರ್ಕ ಕೇಂದ್ರಗಳಿಗ ಕಳುಹಿಸಲಾಗಿದೆ.

ಪ್ರಸ್ತುತ ತಿರಸ್ಕೃತಗೊಂಡ ಪ್ರಸ್ತಾವನೆಗಳ ರೈತರ ಪಟ್ಟಯನ್ನು ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಪ್ರದರ್ಶಿಸಲಾಗುವುದು.

ಸಂಬಂಧಪಟ್ಟ ರೈತರು ಆಕ್ಷೇಪಣೆಗಳು ಇದ್ದಲ್ಲಿ ತಮ್ಮ ಮನವಿ ಸಲ್ಲಿಸಲು ಹಾಗೂ ಮರು ಪರಿಶೀಲಿಸಲು, ಸದರಿ ಮನವಿಯೊಂದಿಗೆ ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು 2021-22ರ ಪಹಣಿ ಪತ್ರಿಕೆಯಲ್ಲಿ (ಆರ್.ಟಿ.ಸಿ) ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರುತ್ತದೆ. ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಸೀದಿ, ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ದಾಖಲಾತಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಯಾವುದೇ ಆಕ್ಷೇಪಣೆಗಳು ರೈತರಿಂದ ಬರದಿದ್ದರೆ ಎಲ್ಲಾ ಪ್ರಸ್ತಾವನೆಗಳನ್ನು ತಿರಸ್ಕೃರಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಳೆ ವಿಮೆ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

2021-22ನೇ ಸಾಲಿನ ಮುಂಗಾರು, ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆಯೊಂದಿಗೆ ಹೋಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿಂದ ತಿರಸ್ಕೃತ ಪ್ರಸ್ತಾವನೆ ಇತ್ಯರ್ಥಕ್ಕೆ ಸಂಬಂಧಿಸಿದ ರೈತರು ಆಕ್ಷೇಪಣೆ ಇದ್ದಲ್ಲಿ ಮನವಿ ಸಲ್ಲಿಸಲು ಕೃಷಿ ಇಲಾಖೆ ಅವಕಾಶ ಕಲ್ಪಿಸಿದೆ.

ಇದನ್ನೂ ಓದಿ : ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ವಿಧಾನ ಬದಲಾವಣೆ- ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ತಿರಸ್ಕೃತಗೊಂಡ ಪ್ರಸ್ತಾವನೆಗಳನ್ನು 5 ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ರೈತರು ಆಕ್ಷೇಪಣೆಗಳಿದ್ದಲ್ಲಿ ಮಾತ್ರ ಮನವಿ ಸಲ್ಲಿಸಬಹುದು.

ಮನವಿಯೊಂದಿಗೆ ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲೆಗಳನ್ನು 15 ದಿನದೊಳಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.

ನಿಮ್ಮ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಮುಂಗಾರು ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ಅಂದರೆ ಕಳೆದ 2021-22 ಸಾಲಿಗೆ ವಿಮೆ ಕಟ್ಟಿದ ರೈತರು ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು 2021-2022 ಆಯ್ಕೆ ಮಾಡಿಕೊಳ್ಳಬೇಕು. ನಂತರ ಖಾರಿಪ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಒಂದು ವೇಳೆ ನೀವು ಹೀಂಗಾರು ಬೆಳೆಯ ವಿಮೆಯ ಅರ್ಜಿಯ ಸ್ಟೇಟಸ್ ಚೆಕ್ ಮಾಡಬೇಕಾದೆರ ರಾಬಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಿದ ಮೇಲೆ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಫಾರ್ಮರ್ಸ್ ಕಾರ್ನರ್ ಕೆಳಗಡೆ ಕಾಣುವ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ ಮೂರು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಸರಿಯಾಗಿ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಬರೆದು Search ಮೇಲೆ ಕ್ಲಿಕ್ ಮಾಡಬೇಕು.ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದು.

Leave a Comment