ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೇ? ಇಲ್ಲೇ ಚೆಕ್ ಮಾಡಿ

Written by Ramlinganna

Updated on:

Whose crop survey completed  ರಾಜ್ಯದಲ್ಲಿ ಬರಗಾಲ ಪರಿಹಾರ ಹಣ ಜಮೆ ಮಾಡಲಾಗುತ್ತಿದೆ. ಆದರೆ ಬರ ಪರಿಹಾರ ಹಣ ಜಮಯಾಗಬೇಕಾದರೆ ಬೆಳೆ ಸಮೀಕ್ಷೆ ಆಗಿರಲೇಬೇಕು. ಹಾಗಾಗಿ ಯಾವ ಯಾವ ರೈತರ ಬೆಳೆ ಸಮೀಕ್ಷೆ ಆಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಬರಗಾಲ ಪರಿಹಾರ ಜಮೆಯಾಗಬೇಕಾದರೆ ಫ್ರೂಟ್ಸ್ ಐಡಿಯೊಂದಿಗೆ ಬೆಳೆ ಸಮೀಕ್ಷೆ ಆಗಿರಬೇಕು.  ಯಾವ ರೈತರ ಬೆಳೆ ಸಮೀಕ್ಷೆಯಾಗಿದೆಯೋ ಆ ರೈತರಿಗಷ್ಟೇ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುವುದು.

ಹೌದು, ರೈತರು ಮುಂಗಾರು ಹಂಗಾಮಿಗೆ ಬಿತ್ತನೆ ಮಾಡಿದ ಬೆಳೆಗಳ ಸಮೀಕ್ಷೆ ಮಾಡಲು ಈಗಾಗಲೇ ಹಲವು ಬಾರಿ ಕೃಷಿ ಇಲಾಖೆಯ ವತಿಯಿಂದ ತಿಳಿಸಲಾಗಿತ್ತು.ಈಗ ಸಂಬಂಧಿಸಿದ ಅಧಿಕಾರಿಗಳು ಸಹ  ಬೆಳೆ ಸಮೀಕ್ಷೆ ಮಾಡಿದ ನಂತರ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುವುದು.

Whose crop survey completed ನಿಮ್ಮ  ಬೆಳೆ ಸಮೀಕ್ಷೆಯಾಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ಬೆಳೆ ಸಮೀಕ್ಷೆ ಮಾಡಿದ ರೈತರು ತಮ್ಮ ಬೆಳೆ ಸಮೀಕ್ಷೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು  ಈ

https://play.google.com/store/apps/details?id=com.crop.offcskharif_2021

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ಬೆಳೆ ದರ್ಶಕ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ರೈತರು ಅಲ್ಲಿ ಕಾಣಿಸುವ ರೈತ ಆಯ್ಕೆ ಮಾಡಿಕೊಳ್ಳಬೇಕು. ನಂತರ ವೈಲ್ ಯೂಸಿಂಗ್ ದಿಸ್ ಆ್ಯಪ್ ಮೇಲೆ ಕ್ಲಿಕ್ ಮಾಡಿ ಅಲೋ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು. ನಂತರ ನೀವು ವರ್ಷ, ಋತು,  ಜಿಲ್ಲೆ, ಹೋಬಳಿ, ಗ್ರಾಮ ಸರ್ವೆ ನಂಬರ್ ನಮೂದಿಸಿ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಮಾಲಿಕರ ವಿವರ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಹೆಸರು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.

ರೈತರು  ಆರಂಭದಲ್ಲಿ ಅಂದರೆ ಮುಂಗಾರು ಬೆಳೆಗಳಿಗೆ ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಮಾಡಲು ತಿಳಿಸಲಾಗಿತ್ತು. ಈಗಾಗಲೇ ಬಹುತೇಕ ರೈತರು ತಮ್ಮ ಮೊಬೈಲ್ ನಲ್ಲೇ ಅವರೇ ಬೆಳೆ ಸಮೀಕ್ಷೆ ಮಾಡಿಕೊಂಡಿದ್ದಾರೆ.  ಇನ್ನೂ ಕೆೆೆೆಲವು ರೈತರು ಸಂಬಂಧಿಸಿದ ಪ್ರತಿನಿಧಿಗಳಿಂದ ಬೆಳೆ ಸಮೀಕ್ಷೆ ಮಾಡಿಸಿಕೊಂಡಿದ್ದಾರೆ. ಆದರೂ ರೈತರು ಒಮ್ಮೆ ಬೆಳೆ ಸಮೀಕ್ಷೆ ಆಗಿರುವುದನ್ನು ಚೆಕ್ ಮಾಡಿಕೊಳ್ಳುವುದು ಉತ್ತಮ.

ಬೆಳೆ ಸಮೀಕ್ಷೆಆಧಾರದ ಮೇಲೆ ಬೆಳೆ ಹಾನಿ ಪರಿಹಾರ

ರಾಜ್ಯ ಸರ್ಕಾರವು ಈಗಾಗಲೇ ಬರಗಾಲ ಘೋಷಣೆ ಮಾಡಿದೆ. ಈಗ ಬೆಳೆ ಸಮೀಕ್ಷೆ ಆಧಾರದ ಮೇಲೆ ಇನ್ಪುಟ್ ಸಬ್ಸಿಡಿ ನೇರ ನಗದು ವರ್ಗಾವಣೆ ಮೂಲಕ ರೈತರ ಖಆತೆಗೆ ಹಣ ವರ್ಗಾವಣೆ ಮಾಡಲಾಗುವುದು.

ಹೌದು, ಈಗಾಗಲೇ ಬೆಳೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮಾಡಬೇಕು.  ಬೆಳೆ ಹಾನಿಯಾದ ಕುರಿತು ಪಾರದರ್ಶಕ ಸಮೀಕ್ಷೆ ನಡೆಸಿ ವರದಿ ನೀಡಬೇಕೆಂದು ಮುಖ್ಯಮಂತ್ರಿಗಳು, ಕಂದಾಯ ಸಚಿವರು ಹಾಗೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಪಿಎಂ ಕಿಸಾನ್ ಅನರ್ಹ ರೈತರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿರುವವರಿಗೆ ಹಣ ಜಮೆಯಾಗಲ್ಲ

2023-24ನೇ ಸಾಲಿನ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯ ಸರ್ಕಾರವು ಕಲಬುರಗಿ ಜಿಲ್ಲೆಯ ಅನಾವೃಷ್ಟಿಯಿಂದ ತುತ್ತಾದ ಎಲ್ಲಾ 11 ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿದ ಪ್ರಯುಕ್ತ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ದತೆ ಸಭೆ ಜರುಗಿತು.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳು ಸರ್ಕಾರದಿಂದ ಬರಗಾಲ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಬೆಳೆ ಸಮೀಕ್ಷೆ ಆಧಾರದ ಮೇಲೆ ಬರಗಾಲ ಸಮೀಕ್ಷೆ ಕೈಗೊಂಡು ಅವರ ವರದಿಯನ್ನು ಆಧರಿಸಿ ಬೆಳೆ ಹಾನಿ ಕ್ಷೇತ್ರಕ್ಕನುಗುಣವಾಗಿ ಇನ್ ಪುಟ್ ಸಬ್ಸಿಡಿ ನೇರ ನಗದು ವರ್ಗಾವಣೆ ಮುಖಾಂತರ ರೈತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಬೇಕೆಂದರು.

ಕೃಷಿ, ಕಂದಾಯ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮರೋಪಾದಿಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಮುಂಗಾರು ಹಂಗಾಮಿನ ಹಾನಿ ಕ್ಷೇತ್ರವನ್ನು ನೈಜವಾಗಿ ಸಮೀಕ್ಷೆ ಮಾಡಬೇಕೆಂದು ಮತ್ತು ವಸ್ತುಸ್ಥಿತಿ ಬಗ್ಗೆ ವರದಿಯಲ್ಲಿ ಬಿಂಬಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Leave a Comment