ಬೆಳೆಹಾನಿಯಾದ ರೈತರ ಖಾತೆಗೆ ಅತೀ ಶೀಘ್ರ ಪರಿಹಾರ ಜಮೆ

Written by Ramlinganna

Updated on:

farmer get compensation soon this year ಅತೀವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿರುವ ರೈತರಿಗೆ ಈ ಬಾರಿ ಶೀಘ್ರ ಪರಿಹಾರ ಹಣ ರೈತರ ಖಾತೆಗೆ ಜಮೆಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಇನ್ನೂ ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗುತ್ತಿದೆ.  ರಾಜ್ಯದಲ್ಲಿ ಸಂಪೂರ್ಣವಾಗಿ ಮಳೆ ನಂತರ ಮೇಲೆ  ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಆದರೆ ರಾಜ್ಯ ಸರ್ಕಾರದ ವತಿಯಿಂದ ರೈತರ ಖಾತೆಗೆ ಅತೀ ಶೀಘ್ರದಲ್ಲಿ ಪರಿಹಾರ ಹಣ ಜಮೆ ಮಾಡಲಾಗುವುದು. ರಾಜ್ಯ ಸರ್ಕಾರದ ವತಿಯಿಂದ ರೈತರಿಗೆ ನೀಡಲಾದ ಪರಿಹಾರ ಹಣವನ್ನು ನಂತರ ಕೇಂದ್ರ ಸರ್ಕಾರದಿಂದ ಪಡೆಯಲಾಗುವುದು. ಈ ಹಣವನ್ನು ರಾಜ್ಯ ಸರ್ಕಾರವು ಬಳಕೆ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಬೆಳೆ ಹಾನಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆ ಈಗಾಗಲೇ ಪ್ರಾಥಮಿಕ ವರದಿ ಪಡೆದಿದೆ. ಇದೀಗ ಕೃಷಿ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಸಮೀಕ್ಷೆ ಪೂರ್ಣಗೊಂಡ ನಂತರ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಕೃಷಿ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.

farmer get compensation soon this year ಬೆಳೆ ಹಾನಿ ಪರಿಹಾರದ ಸ್ಟೇಟಸನ್ನು ರೈತರು ಮೊಬೈಲ್ ನಲ್ಲೇ ನೋಡಬಹುದು

ಕಳೆದ ಎರಡು ಮೂರು ವರ್ಷಗಳಲ್ಲಿ ಬೆಳೆಹಾನಿಯಾದಾಗ ರೈತರ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ. ಯಾವ ಬ್ಯಾಂಕಿಗೆ ಹೋಗಿ ಕೇಳುವ ಅಗತ್ಯವಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲೇ 2020-21, 2021-22 ಹಾಗೂ 2022-23ನೇ ಸಾಲಿನ ಬೆಳೆ ಹಾನಿ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು ರೈತರು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ಕಂದಾಯ ಇಲಾಖೆಯ ಪರಿಹಾರ ಹಣ ಸಂದಾಯ ವರದಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಸಂಖ್ಯೆ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು.  ನಂತರ calamity type ನಲ್ಲಿ ಫ್ಲಡ್ ಆಯ್ಕೆ ಮಾಡಿಕೊಳ್ಳಬೇಕು. ವರ್ಷದಲ್ಲಿ ಯಾವ ಸಾಲಿನ ಬೆಳೆ ನಷ್ಟ ಪರಿಹಾರ ಸ್ಟೇಟಸ್ ನೋಡಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು.

ಉದಾಹರಣೆಗೆ 2021-22ನೇ ಸಾಲಿನ ಸ್ಟೇಟಸ್ ಚೆಕ್ ಮಾಡಬೇಕಾದರೆ 2021-22 ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಆಧಾರ್ ಸಂಖ್ಯೆಯನ್ನು ನಮೂದಿಸಿ ಕ್ಯಾಪ್ಚ್ಯಾ ಕೋಡ್  ನಮೂದಿಸಬೇಕು.  ತದನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ  ನಿಮ್ಮ ಯಾವ ಬ್ಯಾಂಕಿಗೆ ಎಷ್ಟು ಬೆಳೆಹಾನಿ ಪರಿಹಾರ ಹಣ ಜಮೆಯಾಗಿದೆ.  ಯಾವ ದಿನಾಂಕದಂದು ಜಮೆಯಾಗಿದೆ. ನಿಮ್ಮ ಯಾವ ಸರ್ವೆ ನಂಬರ್ ಜಮೀನಿಗೆ, ಯಾವ ಬೆಳೆಗೆ ಪರಿಹಾರ ಜಮೆಯಾಗಿದೆ ಎಂಬ ಮಾಹಿತಿ ಕಾಣುತ್ತದೆ.

ಇದೇ ರೀತಿ ನೀವು 2020-22ನೇ ಸಾಲಿನ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು 2020-21 ಆಯ್ಕೆ ಮಾಡಿಕೊಂಡು ಆಧಾರ್ ಕಾರ್ಡ್ ನಮೂದಿಸಿದ ನಂತರ ಕ್ಯಾಪ್ಚ್ಯಾ ಕೋಡ್ ನಮೂದಿಸಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಪರಿಹಾರ ಸ್ಟೇಟಸ್ ಚೆಕ್ ಮಾಡಬಹುದು.

ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

2022-23ನೇ ಸಾಲಿನ ಹಣ ಇನ್ನೂ ಬಿಡುಗಡೆ ಮಾಡಿಲ್ಲ. ಹಾಗಾಗಿ ಈಗ ನಿಮ್ಮ ಖಾತೆಗೆ ಹಣ ಸಂದಾಯವಾಗಿಲ್ಲ ಎಂಬ ಸಂದೇಶ ಕಾಣುತ್ತದೆ. ಇತ್ತೀಚೆಗೆ ಕಂದಾಯ ಸಚಿವರು ಈಗಾಗಲೇ ಅತೀ ಶೀಘ್ರದಲ್ಲಿ ರೈತರ ಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡಿದ ನಂತರ ಈ ವರ್ಷ ಎಷ್ಟು ಹಣ ಜಮೆಯಾಗುತ್ತದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

Leave a Comment