ನಿಮಗೇಕೆ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ

Written by Ramlinganna

Updated on:

you received pm kisan  ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡ ಎಲ್ಲಾ ರೈತರ ಖಾತೆಗೆ ಏಕೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಿಎಂ ಕಿಸಾನ್ ಯೋಜನೆ ಆರಂಭವಾಗಿ ಇಲ್ಲಿಯವರೆಗೆ 17 ಕಂತುಗಳ ರೈತರ ಖಾತೆಗೆ ಜಮೆಯಾಗಿದೆ. ಕೆಲವು ರೈತರಿಗೆ ಆರಂಭದಲ್ಲಿ ಜಮೆಯಾಗುತ್ತಿತ್ತು. ನಂತರ ಜಮೆಯಾಗುತ್ತಿಲ್ಲ. ಇನ್ನೂ ಕೆಲವು ರೈತರಿಗೆ  14 ಮತ್ತು 15ನೇ ಕಂತಿನವರೆೆೆಗೆ ಜಮೆಯಾಗಿದೆ. ಈಗ ಜಮೆಯಾಗುತ್ತಿಲ್ಲ. ಯಾವ ಕಾರಣಕ್ಕಾಗಿ ಜಮೆ ಮಾಡುವುದನ್ನು ತಡೆಹಿಡಿಯಲಾಗಿದೆ ಎಂಬುದೇ ಗೊತ್ತಿಲ್ಲ.

ಪಿಎಂ ಕಿಸಾನ್ ಹಣ ಜಮೆಯಾಗದೆ ಇರುವುದಕ್ಕೆ ಹಲವಾರು ಕಾರಣಗಳಿವೆ. ನಿಮಗೆ ಯಾವ ಕಾರಣಕ್ಕಾಗಿ ಜಮೆಯಾಗಿಲ್ಲ ಎಂಬುದನ್ನು ಇಲ್ಲೇ ಚೆಕ್ ಮಾಡಿ ಸರಿಪಡಿಸಿಕೊಳ್ಳಬಹುದು.

ಮೊದಲನೇಯದಾಗಿ ಇಕೆವೈಸಿ ಮಾಡಿಸುವುದು ಕಡ್ಡಾಯ

ಹೌದು, ರೈತರು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದ 6 ಸಾವಿರ  ರೂಪಾಯಿಗಳ ಆರ್ಥಿಕ ಸೌಲಭ್ಯ ಪಡೆಯುವ ರೈತ ಫಲಾನುಭವಿಗಳು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇಕೆವೈಸಿ ಮಾಡಿಕೊಳ್ಳದ ಫಲಾನುಭವಿಗಳಿಗೆ ಮುಂದಿನ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ. ಈವರೆಗೂ ಇಕೆವೈಸಿ ಮಾಡಿಸದೆ ಇರುವ ರೈತ ಫಲಾನುಭವಿಗಳು  ತಮ್ಮ ಆಧಾರ್ ಸಂಖ್ಯೆಯೊಂದಿಗೆ ಈ ಕೆಳಗಡೆ ತಿಳಿಸಿದ ವಿಧಾನಗಳ ಮೂಲಕ ಇಕೆವೈಸಿ ಮಾಡಿಸಿಕೊಳ್ಳಬಹುದು.

ಯಾವ ಯಾವ ವಿಧಾನದ ಮೂಲಕ ಇಕೆವೈಸಿ ಮಾಡಿಸಿಕೊಳ್ಳಬೇಕು?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಮುಂದಿನ ಕಂತು ಜಮೆಯಾಗಬೇಕಾದರೆ ಇಕೆವೈಸಿ ಕಡ್ಡಾಯವಾಗಿದೆ. ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಗ್ರಾಮ ಒನ್ ಕೇಂದ್ರ ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಓಟಿಪಿ ಮೂಲಕ ಇಕೆವೈಸಿ ಮಾಡಿಸಬಹುದು.

ಫಲಾನುಭವಿಗಳು ಸ್ವತಃ ತಾವೇ ಪಿಎಂ ಕಿಸಾನ್ ಪೋರ್ಟಲ್ ಮೂಲಕ ಮೊಬೈಲ್ ಓಟಿಪಿ ಪಡೆದು ಇಕೆವೈಸಿ ಮಾಡಬಹುದು.

ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ಮಾಡಿ ಪೋಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕವೂ ಪಿಎಂ ಕಿಸಾನ್ ಇಕೆವೈಸಿಯನ್ನು ತ್ವರಿತವಾಗಿ ಮಾಡಿಕೊಳ್ಳಬಹುದು.

ಇದನ್ನೂ ಓದಿ : Ration card status ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಇಕೆವೈಸಿ ಮಾಡಿಸಿದರೂ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲವೇ? ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಮಾಡಿಸಿದರೂ ನಿಮಗೆ 17ನೇ ಕಂತಿನ ಹಣ ಜಮೆಯಾಗಿಲ್ಲವೇ? ನಿಮಗೇಕೆ ಜಮೆಯಾಗಿಲ್ಲ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Know Your status pm kisan ಪೇಜ್ ಕಾಣಿಸುತ್ತದೆ. Enter Registration No  ಬಾಕ್ಸ್ ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕಬೇಕು. ನಿಮ್ಮ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ Know your Registration Number ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ Get Mobile OTP ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ನಿಮ್ಮ ರೆಜಿಸ್ಟ್ರೇಶನ್ ನಂಬರ್ ಬರೆದಿಟ್ಟುಕೊಳ್ಳಬೇಕು. ಇದು ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಸಹಾಯವಾಗುತ್ತದೆ.

ಸ್ಟೇಟಸ್ ಪೇಜ್ ನಲ್ಲಿ ನಿಮ್ಮ ರೆಜಿಸ್ಟ್ರೇನ್ ನಂಬರ್ ಕ್ಯಾಪ್ಚ್ಯಾ ಕೋಡ್ ಹಾಕಿದ ನಂತರ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ನಿಮಗೇಕೆ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲವೆಂಬುದನ್ನು ಚೆಕ್ ಮಾಡಬಹುದು.

you received pm kisan  ಪಿಎಂ ಕಿಸಾನ್ ಹಣ ಜಮೆಯಾಗಲು ಏನೇನು ಮಾಹಿತಿ ಸರಿಯಿರಬೇಕು?

Eligibility Status ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿLand Seeding ಎದುರುಗಡೆ Yes ಇರಬೇಕು. ಅದೇ ರೀತಿ

E kyc  Status  ಎದುರುಗಡೆ Yes ಇರಬೇಕು. ಅದೇ ರೀತಿ

Aadhar Bank account seeding status ಎದುರುಗಡೆಯೂ Yes ಇರಹಬೇಕು. ಆಂದಾಗ ಮಾತ್ರ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ. ನಿಮಗೆ ಪಿಎಂ ಕಿಸಾನ್ ಹಣ ತಡೆಹಿಡಿದ್ದರೆ

Reason of ineligibility ಮೇಲೆ ಕ್ಲಿಕ್ ಮಾಡಿದ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬುದನ್ನು ಚೆಕ್ ಮಾಡಬಹುದು.

ಪಿಎಂ ಕಿಸಾನ್ ಯೋಜನೆ ಹಣ ಜಮೆಯಾಗಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ಪಹಣಿಯಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಒಂದಕ್ಷರವೂ ವ್ಯತ್ಯಾಸವಾಗಿದ್ದರೆ ಹಣ ಜಮೆಯಾಗುವಸಾಧ್ಯತೆ ಕಡಿಮೆ ಇರುತ್ತದೆ.

Leave a Comment