ಈ ರೈತರಿಗೇಕೆ ಬೆಳೆ ವಿಮೆ ಹಣ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ

Written by Ramlinganna

Updated on:

farmers not received insurance money ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ಕೆಲವು ರೈತರಿಗೆ ವಿಮೆ ಹಣ ಜಮೆಯಾದರೆ ಇನ್ನೂ ಕೆಲವು ರೈತರಿಗೇಕೆ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ.

ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿರುತ್ತಾರೆ. ಆದರೆ ಬೆಳೆ ವಿಮೆ ಮಾಡಿಸಿದ ನಂತರ ವಿಮೆ ಹಣ ಏಕೆ ಜಮಯಾಗಿಲ್ಲವೆಂಬುದು ಗೊತ್ತಿರುವುದಿಲ್ಲ.

ಬೆಳೆ ವಿಮೆ ಮಾಡಿಸಿದ ಮಾತ್ರಕ್ಕೆ  ವಿಮೆ ಹಣ ಜಮೆಯಾಗುವುದಿಲ್ಲ. ಹಾಗೂ ಯಾವ ಪ್ರಮಾಣದಲ್ಲಿ ಬೆಳೆ ಹಾಳಾದರೆ ಎಷ್ಟು  ವಿಮೆ ಹಣ ಜಮೆಯಾಗುತ್ತದೆ? ಎಂಬುದರ ಮಾಹಿತಿ ಇಲ್ಲಿದೆ.

farmers not received insurance money ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ? ಹೀಗೆ ಚೆಕ್ ಮಾಡಿ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿಮೆ ಮಾಡಿಸಿದ ರೈತರು ಯಾವ ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/Premium/Premium_Chart.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮುಂಗಾರು ಹಂಗಾಮಿನ ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬುದನ್ನು ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಂಡ ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನೀವು ಯಾವ ಬೆಳೆಗೆ ವಿಮೆ ಮಾಡಿಸಿದ್ದೀರೋ ಆ ಬೆಳೆಯನ್ನು ಆಯ್ಕೆ ಮಾಡಿಕೊಳ್ಳಬೇಕು.

ಎಷ್ಟು ಎಕರೆಗೆ ಬೆಳೆ ವಿಮೆ ಮಾಡಿಸಿದ್ದೀರೋ ಅದನ್ನೂ ನಮೂದಿಸಬೇಕು. ನಂತರ Show Premium ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಹೆಕ್ಟೇರಿಗೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬುದು ಮೇಲ್ಗಡೆ ಕಾಣಿಸುತ್ತದೆ. ಅದರ ಕೆಳಗಡೆ ನೀವು ನಮೂದಿಸಿದ ಒಂದು ಎಕರೆಗೆ ಎಷ್ಟು ವಿಮೆ ಹಣ ಜಮೆಯಾಗಬಹುದು  ಎಂಬುದು ಕಾಣಿಸುತ್ತದೆ. ಅದರ ಎದುರುಗಡೆ ನೀಡು ಫಾರ್ಮರ್ ಶೇರ್ ನಲ್ಲಿ ನೀವೆಷ್ಟು ವಿಮೆಹಣ ಪಾವತಿಸಿದ್ದೀರಿ ಎಂಬುದನ್ನು ನಮೂದಿಸಲಾಗಿರುತ್ತದೆ.

ನಿಮಗೇಕೆ ಬೆಳೆ ವಿಮೆ ಹಣ ಜಮೆಯಾಗಿಲ್ಲ?

ಬೆಳೆ ವಿಮೆ ಮಾಡಿಸಿದ ನಂತರ ರೈತರು ಪ್ರಾಕೃತಿಕ ವಿಕೋಪದಿಂದಾಗಿ ಮಳೆ ಹಾಳಾದಾಗ ಸಂಬಂಧಿಸಿದ ವಿಮಾ ಕಂಪನಿಗೆ 72 ಗಂಟೆಯೊಳಗೆ ಮಾಹಿತಿ ನೀಡಬೇಕು. ಆದರೆ ರೈತರು ಇದೇ ಕೆಲಸವನ್ನು ಮಾಡುವುದಿಲ್ಲ. ಬೆಳೆ ಹಾಳಾದಾಗ ವಿಮೆ ಕಂಪನಿಗೆ ತಿಳಿಸುವುದು ಕಡ್ಡಾಯವಾಗಿದೆ.

ವಿಮಾ ಕಂಪನಿಗೆ ಮಾಹಿತಿ ನೀಡಿದಾಗ ವಿಮಾ ಕಂಪನಿಯ ಸಿಬ್ಬಂದಿಗಳು ರೈತರ ಜಮೀನಿಗೆ ಬಂದು ಬೆಳೆ ಹಾಳಾಗಿರುವುದನ್ನು ಪರಿಶೀಲನೆ ಮಾಡುತ್ತಾರೆ. ಎಷ್ಟು ಪ್ರಮಾಣದಲ್ಲಿ ಬೆಳೆ ಹಾಳಾಗಿದೆ ಎಂಬುದನ್ನು ಪರಿಶೀಲಿಸಿ ವಿಮಾ ಕಂಪನಿಯ ಮೇಲಧಿಕಾರಿಗಳಿಗೆ ವರದಿ ಕಳಿಸುತ್ತಾರೆ. ಆಗ ರೈತರಿಗೆ ವಿಮೆ ಹಣ ಬಿಡುಗಡೆ ಮಾಡಲಾಗುತ್ತದೆ. ಆದರೆ ರೈತರು ವಿಮಾ ಕಂಪನಿಗೆ ತಿಳಿಸುವುದೇ ಇಲ್ಲ.

ಇದನ್ನೂ ಓದಿ : ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬೆಳೆ ವಿಮೆಯ ರೈತರ ವಂತಿಗೆಯನ್ನು ರೈತರು ಬ್ಯಾಂಕಿನಲ್ಲಿ ಕಡಿತಗೊಳಿಸುತ್ತಾರೆ. ಅಥವಾ ತಮ್ಮ ಹತ್ತಿರದ ಸಿಎಸ್.ಸಿ ಕೇಂದ್ರ ಗ್ರಾಮ ಒನ್ ಕೇಂದ್ರಗಳಲ್ಲಿ ಪಾವತಿಸುತ್ತಾರೆ. ಆದರೆ ಯಾವ ಕಂಪನಿಗೆ ವಿಮೆ ಹಣ ಕಟ್ಟಿರುತ್ತಾರೆ. ಹಾಗೂ ಆ ಜಿಲ್ಲೆಯ ವಿಮಾ ಕಂಪನಿಯ ಸಿಬ್ಬಂದಿಗಳ ಮೊಬೈಲ್ ನಂಬರ್ ಇಟ್ಟುಕೊಂಡಿರುವುದಿಲ್ಲ.

ತಮ್ಮ ಜಿಲ್ಲೆಯ ವಿಮಾ ಕಂಪನಿಯ ತಾಲೂಕಿನ ಸಿಬ್ಬಂದಿಗಳ ನಂಬರ್ ಗಳನ್ನು ರೈತ ಸಂಪರ್ಕ ಕೇಂದ್ರಗಳಿಂದಲೂ ಪಡೆಯದುಕೊಳ್ಳಬಹುದು. ಆದರೆ ವಿಮಾ ಕಂಪನಿಯ ಸಿಬ್ಬಂದಿಗಳ ನಂಬರ್ ಪಡೆದುಕೊಳ್ಳದೆ ಮುಂದೆ ಸಮಸ್ಯೆ ಎದುರಿಸುತ್ತಾರೆ. ಏಕೆಂದರೆ ಬೆಳೆ ಹಾಳಾದಾಗ ವಿಮಾ ಕಂಪನಿಗೆ ತಿಳಿಸುವುದು ಕಡ್ಡಾಯವಾಗಿರುತ್ತದೆ ಎಂಬುದನ್ನು ಮರೆತುಬಿಡುತ್ತಾರೆ. ನಂತರ ವಿಮಾ ಹಣ ಜಮೆಯಾಗಿಲ್ಲವೆಂದು ಕೊರಗುತ್ತಾರೆ.

ರೈತರು ವಿಮಾ ಕಂಪನಿಯ ಸಿಬ್ಬಂದಿಗಳ ನಂಬರ್ ಪಡೆದು ಬೆಳೆ ಹಾಳಾದಾಗ ವಿಮಾ ಕಂಪನಿಗೆ ತಿಳಿಸುವುದನ್ನು ಮರೆಯಬಾರದು.

Leave a Comment