PM Kisan ಪಟ್ಟಿಯಲ್ಲಿದ್ದರೂ ಏಕೆ ಹಣ ಜಮೆಯಾಗಲ್ಲ

Written by Ramlinganna

Updated on:

Why these farmers not get pm kisan ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದರೂ ಸಹಿತ ಕೆಲವು ರೈತರಿಗೆ ಇನ್ನೂ ಮುಂದೆ 13ನೇ ಕಂತಿನ ಹಣ ಜಮೆಯಾಗುವುದಿಲ್ಲ. ಆ ರೈತರಿಗೇಕೆ ಜಮೆಯಾಗುವುದಿಲ್ಲ? 13ನೇ ಕಂತಿನ ಹಣ ಜಮೆಯಾಗಲು ರೈತರೇನು ಮಾಡಬೇಕು? ಇಲ್ಲಿದೆ ಮಾಹಿತಿ.

ರೈತರ ಆರ್ಥಿಕ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ. ಹೌದು, ಈ ಯೋಜನೆಯಡಿಯಲ್ಲಿ 2 ಹೆಕ್ಟೇರಿಗಿಂತ ಕಡಿಮೆ ಭೂ ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ಒಂದು ವರ್ಷಕ್ಕೆ 6 ಸಾವಿರ ರೂಪಾಯಿಗಳನ್ನುಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ 2018 ರ ಡಿಸೆಂಬರ್ 1 ರಿಂದ ಜಾರಿಗೆ ತರಲಾಗಿದೆ. ಪಿಎಂ ಕಿಸಾನ್ ಯೋಜನೆಗೆ ನೋಂದಾಯಿಸಿಕೊಂಡಿರುವ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ಆದರೆ ನೋಂದಾಯಿಸಿಕೊಂಡಿರುವ ಎಲ್ಲಾ ರೈತರ ಖಾತೆಗೇಕೆ ಪಿಎಂ ಕಿಸಾನ್ ಹಣ ಜಮಯಾಗಲ್ಲ.

Why these farmers not get pm kisan ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದೀರಾ? ಹೀಗೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆ ಮಾಡಿಕೊಂಡ ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರಿರುವುದನ್ನು ಚೆಕ್ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ, ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ. ಆದರೆ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಎಲ್ಲಾ ರೈತರಿಗೆ ಹಣ ಜಮೆಯಾಗಲ್ಲ. ಏಕೆಂದರೆ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳುವಾಗ ಜೋಯನೆಗೆ ಅನರ್ಹತೆ ಇರುವ ಶ್ರೀಮಂತರೂ ಹೆಸರು ನೋಂದಣಿ ಮಾಡಿಸಿಕೊಂಡಿದ್ದರು. ಹಾಗಾಗಿ ನಿಜವಾದ ಫಲಾನುಭವಿಗಳಿಗೆ ಲಾಭ ಸಿಗಲೆಂದು ಇಕೆವೈಸಿ ಕಡ್ಡಾಯಗೊಳಿಸಿತ್ತು. ಇಕೆವೈಸಿ ಆದನಂತರ ಲ್ಯಾಂಡ್ ಸೀಡಿಂಗ್ ಯಸ್ ಇದ್ದರೆ ಮಾತ್ರ ರೈತರ ಖಾತೆಗೆ ಹಣ ಜಮೆಯಾಗುವುದಿಲ್ಲ.

ನೀವು ಇಕೆವೈಸಿ ಮಾಡಿದ್ದು ಸಕ್ಸೆಸ್ ಆಗಿದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ

ರೈತರು ಇಕೆವೈಸಿ ಮಾಡಿಸಿದ್ದು ಸಕ್ಸೆಸ್ ಆಗಿರುವುದನ್ನು ಚೆಕ್ ಮಾಡಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಓಪನ್ ಆಗುವ ಪೇಜ್ ನಲ್ಲಿನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಇಕೆವೈಸಿ ಸಕ್ಸೆಸ್ ಆಗಿದೆಯೋ ಇಲ್ಲವೋ ಗೊತ್ತಾಗುತ್ತದೆ.  ಒಂದು ವೇಳೆ ನೀವು ಇಕೆವೈಸಿ ಮಾಡಿಸದಿದ್ದರೂ ಕೂಡಲೇ ಮೊಬೈಲ್ ನಲ್ಲಿ ಅಥವಾ ಗ್ರಾಮಒನ್, ಕರ್ನಾಟಕ ಒನ್, ಸಿ.ಎಸ್.ಸಿ ಕೇಂದ್ರಗಳಲ್ಲಿಯೂ ಬಯೋಮೆಟ್ರಿಕ್ ಇಕೆವೈಸಿ ಮಾಡಿಸಿಕೊಳ್ಳಬಹುದು.

ಇಕೆವೈಸಿ ಮಾಡಿಸಿದ ನಂತರ ಲ್ಯಾಂಡ್ ಸೀಡಿಂಗ್ ನಲ್ಲಿ ಯಸ್ ಇರವುದು ಚೆಕ್ ಮಾಡುವುದು ಹೇಗೆ?

ರೈತರು ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆದ ನಂತರ 13ನೇ ಕಂತು ಜಮೆಯಾಗಲು ಲ್ಯಾಂಡ್ ಸೀಡಿಂಗ್ ನಲ್ಲಿ ಯಸ್ ಇರಬೇಕು. ಇದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಇಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಗೂ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಡಾಟಾ ಮೇಲ ಕ್ಲಿಕ್ ಮಾಡಿದಾಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ Land Seeding ಎದುರುಗಡೆ yes ಇರಲೇಬೇಕು.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

ಇದನ್ನೂ ಓದಿ ಗ್ರಾಮ ಪಂಚಾಯತ್ ಮಾಹಿತಿ whatsapp ನಲ್ಲಿ ಹೀಗೆ ಪಡೆಯಿರಿ

Leave a Comment