DBT APP status check ಸರ್ಕಾರದ ಯಾವ ಯಾವ ಯೋಜನೆಗಳಿಂದ ರೈತರ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಿಂದ ವಿವಿಧ ಯೋಜನೆಗಳಡಿಯಲ್ಲಿ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆ, ರಾಜ್ಯ ಸರ್ಕಾರದ ರೈತ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮೀ ಯೋಜನೆಗಳಿಂದ ಎಷ್ಟು ಹಣ ಯಾವ ತಿಂಗಳಲ್ಲಿ ಜಮೆಯಾಗಿದೆ ಎಂಬುದನ್ನು ಅತೀ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಕೇವಲ ಡಿಬಿಟಿ ಆ್ಯಪ್ ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದು.
DBT APP status check ಡಿಬಿಟಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?
ಸರ್ಕಾರದ ವಿವಿಧ ಯೋಜನೆಗಳಿಂದ ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ
DBT Karnataka ಎಂದು ಟೈಪ್ ಮಾಡಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿದ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಡಿಬಿಟಿ ಕೆಳಗಡೆ ಅಲೋ ಮೇಲೆ ಕ್ಲಿಕ್ ಮಾಡಬೇಕು. ಮತ್ತೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಅಲ್ಲಿ ಕೆಳಗಡೆ ಕಾಣಿಸುವ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮ್ಮ ಆಧಾರ್ ಕಾರ್ಡಿಗೆ ನೋಂದಣಿಯಾಗಿರುವ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ಮೇಲ್ಗಡೆ ನಮೂದಿಸಿ ಪಿನ್ ನ್ನು ಮತ್ತೇ ಕೆಳಗಡೆ ಹಾಕಬೇಕು. ಈ ಪಿನ್ ಅನ್ನು ನೀವು ನೆನಪಿಟ್ಟುಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು..ಆಗ ನಿಮ್ಮ ಫೋಟೋ ಕಾಣಿಸುತ್ತದೆ.
ಅಲ್ಲಿ ನಿಮ್ಮ ಹೆಸರು, ವಿಳಾಸ ಕಾಣಿಸುತ್ತದೆ. ನಿಮ್ಮ ಹುಟ್ಟಿದ ದಿನಾಂಕ ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಓಕೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಡಿಬಿಟಿ ಆ್ಯಪ್ ಓಪನ್ ಆಗುತ್ತದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಒರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಅಲ್ಲಿ ಪೇಮೆಂಟ್ ಸ್ಟೇಟಸ್, ಪ್ರೌಫೈಲ್ ಹಾಗೂ ಕಂಟ್ಯಾಕ್ಟ್ ಹೀಗೆ ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವ ಯಾವ ಯೋಜನೆಗಳಿಂದ ನಿಮಗೆ ಹಣ ಜಮೆಯಾಗುತ್ತಿದೆ ಎಂಬ ಪಟ್ಟಿ ಕಾಣಿಸುತ್ತದೆ. ಆ ಯೋಜನೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
ಪ್ರೊಫೈಲ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಸಂಪೂರ್ಣ ವಿಳಾಸ ಕಾಣಿಸುತ್ತದೆ. ಅದೇ ರೀತಿ ಕಂಟ್ಯಾಕ್ಟ್ ಮೇಲೆ ಕ್ಲಿಕ್ ಮಾಡಿದರೆ ಡಿಬಿಟಿ ಆ್ಯಪ್ ಅಭಿವೃದ್ಧಿ ಪಡಿಸಿದ ವಿಳಾಸ ಹಾಗೂ ಕಂಟ್ಯಾಕ್ಟ್ ನಂಬರ್ ಕಾಣಿಸುತ್ತದೆ.ನಂತರ ನೀವು ಕೆಲವು ದಿನಗಳ ನಂತರಡಿಬಿಟಿ ಆ್ಯಪ್ ಓಪನ್ ಮಾಡಿದರೆ ಅಪ್ಡೇಟ್ ಇದ್ದರೆ ಕೇಳುತ್ತದೆ.
ಅಲ್ಲಿ ಸೆಲೆಕ್ಟ್ ಬೆನಿಫಿಶಿಯರಿ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಆ್ಯಪ್ ಇನಸ್ಟಾಲ್ ಮಾಡುವಾಗ ಪಿನ್ ಕ್ರಿಯೇಟ್ ಮಾಡಿದನ್ನು ನಮೂದಿಸಬೇಕಾಗುತ್ತದೆ. ಇಲ್ಲದಿದ್ದರೆ ಆ್ಯಪ್ ಓಪನ್ ಆಗುವುದಿಲ್ಲ.