ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಸಹಾಯಧನದೊಂದಿಗೆ ಬ್ಯಾಂಕ್ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಉದ್ಯೋಗಿನಿ, ಕಿರುಸಾಲ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಅರ್ಹ ಮಹಿಳೆಯರು ಮತ್ತು ಸ್ತ್ರೀಶಕ್ತಿ ಗುಂಪುಗಳಿಗೆ ಬ್ಯಾಂಕ್ ಸಾಲ ಹಾಗೂ ನಿಗಮದ ಸಹಾಯಧನದೊಂದಿಗೆ ಸೌಲಭ್ಯ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತನರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿ ಪಾರ್ಲರ್, ಟೈಲರಿಂಗ, ವ್ಯಾಪಾರ ಮತ್ತಿತರ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಹಾಯಧನ ನೀಡಲಾಗುವುದು.
ಈ ಯೋಜನೆಯಡಿ ಪ್ರಯೋಜನ ಪಡೆಯಲು 18 ರಿಂದ 55 ವರ್ಷ ವಯೋಮಿತಿಗೆ ಒಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿದೆ.
18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಘಟಕದ ವೆಚ್ಚ 1 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಯವರೆಗೆ ಹಾಗೂ ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಮತ್ತು ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಮೀರಬಾರದು.
ಇದನ್ನೂ ಓದಿ : ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಅಳತೆ ಮಾಡಬೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಆಸಕ್ತ ಕೊಡಗು ಜಿಲ್ಲೆಯ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಮಡಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂರವಾಣಿ ಸಂಖ್ಯೆ 08272 295087, ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತಿ ಭವನ, ತಾಲೂಕು ಪಂಚಾಯತಿ ಆವರಣ ಸೋಮವಾರಪೇಟೆ ದೂರವಾಣಿ ಸಂಖ್ಯೆ 08276 200023, ಮೊಬೈಲ್ ನಂಬರ್ 9900765821 ನಂಬರಿಗೆ ಸಂಪರ್ಕಿಸಬಹುದು. ಅದೇ ರೀತಿ ವಿರಾಜಪೇಟೆ ತಾಲೂಕು, ಶಿಶು ಅಭಿವೃದ್ಧಿಯೋಜನಾಧಿಕಾರಿಗಳಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ ಆವರಣದ, ತೋಟಗಾರಿಕೆ ಇಲಾಖೆ ಹಿಂಭಾಗ, ಪೊನ್ನಂಪೇಟೆ 571216, ದೂರವಾಣಿ ಸಂಖ್ಯೆ 08274 201878, ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್. ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏನಿದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ?
ನಿರುದ್ಯೋಗಿ ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಸರ್ಕಾರವು ಉದ್ಯೋಗಿನಿ ಯೋಜನೆ ಸೇರಿದಂತೆ ಬೇರೆ ಬೇರೆ ಯೋಜನೆಗಳನ್ನು ಜಾರಿಗೆ ತಂದಿದೆ.. ಈ ಯೋಜನೆಗಳಡಿಯಲ್ಲಿ ಮಹಿಳೆಯರಿಗೆ ಸಹಾಯಧನದೊಂದಿಗೆ ಸಾಲ ಸೌಲಭ್ಯಸಹ ನೀಡಲಾಗುವುದು. ಈ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗ ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಾಲ ಸೌಲಭ್ಯ ನೀಡಲಾಗುವುದು.
ಯೋಜನೆ ಸೌಲಭ್ಯ ಪಡೆಯಲು ಯಾವ ದಾಖಲೆ ಸಲ್ಲಿಸಬೇಕು?
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸೌಲಭ್ಯ ಪಡೆಯಲಿಚ್ಚಿಸುವ ಮಹಿಳೆಯರು ಆಧಾರ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ವಿಧವೆ, ಅಂಗವಿಕಲರಾಗಿದ್ದರೆ ಪ್ರಮಾಣ ಪತ್ರ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು.