ನಿರುದ್ಯೋಗಿಗಳು 1500 ರಿಂದ 3000 ಪಡೆಯಲು ಈ ಕೆಲಸ ಮಾಡಿ

Written by Ramlinganna

Published on:

Yavanidhi scheme self declaration : ರಾಜ್ಯ ಸರ್ಕಾರದ 5ನೇ ಗ್ಯಾರೆಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯಡಿ ನೋಂದಣಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ.

ರಾಜ್ಯ ಸರ್ಕಾರದ 5ನೇ ಗ್ಯಾರೆಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯಡಿ ನೋಂದಣಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ.

ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಕೆಗೆ ಫೆಬ್ರವರಿ 29 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಫಲಿತಾಂಶ ನಂತರ ನಿರುದ್ಯೋಗಿಗಳಿಗಾಗಿ 180 ದಿನಗಳು ಪೂರೈಸಿದ ಅಭ್ಯರ್ಥಿಗಳಿಗೆ ಕಳೆದ ಜನವರಿ 2024 ರಂದು ನೇರ ನಗದು ಮೂಲಕ ನಿರುದ್ಯೋಗ ಭತ್ಯೆ ವರ್ಗಾವಣೆ ಮಾಡಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪಡೆಯಬೇಕಾದಲ್ಲಿ ತಾವು ನಿರುದ್ಯೋಗಿ ಎಂದು ವ್ಯಾಸಂಗ ಮುಂದುವರಿಸುತ್ತಿಲ್ಲವೆಂದು ಸ್ವಯಂ ಉದ್ಯೋಗವಿಲ್ಲ ಎಂದು ಸ್ವಯಂ ಘೋಷಣೆ ಮಾಡಬೇಕಾಗುತ್ತದೆ.

ಈ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರತಿ ತಿಂಗಳು 25 ನೇ ದಿನಾಂಕದೊಳಗಾಗಿ ಸ್ವಯಂ ಘೋಷಣೆ ಮಾಡಬೇಕು. ಘೋಷಣೆ ಮಾಡದೆ ಇರುವ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ

 https://sevasindhugs.karnataka.gov.in

ವೆಬ್ಸೈಟ್ ನ್ನು ಸಂಪರ್ಕಿಸಲು ಕೋರಲಾಗಿದೆ.

Yavanidhi scheme self declaration ಸ್ವಯಂ ಘೋಷಣೆ ಸಲ್ಲಿಕೆಗೆ ಫೆಬ್ರವರಿ 29 ರವರೆಗೆ ವಿನಾಯಿತಿ

ಯುವನಿಧಿ ಯೋಜನೆಯಡಿ ಮಾಸಿಕ ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು 25 ರಂದು ಅಥವಾ ಮೊದಲು ನಿರುದ್ಯೋಗ ಸ್ವಯಂ ಘೋಷಣೆಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಆದರೆ ಫಲಾನುಭವಿಗಳು ಸ್ವಯಂ ಘೋಷಣೆ ಸಲ್ಲಿಸಲು ಈ ತಿಂಗಳು ಫೆಬ್ರವರಿ 29 ರವರೆಗೆ ವಿನಾಯಿತಿ ನೀಡಲಾಗಿರುತ್ತದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್  ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿಯು ಅನುಷ್ಠಾನಗೊಂಡು ಈಗಾಗಲೇ ಮಾಸಿಕ ನಿರುದ್ಯೋಗ ಭತ್ಯೆಯನ್ನು ಪಡೆದಿರುವ ಫಲಾನುಭವಿಗಳು ಮುಂದಿನ ಮಾಸಿಕ ನಿರುದ್ಯೋಗ ಭತ್ಯೆಯನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಹತ್ತಿರದ ಕರ್ನಾಟಕ ಒನ್ / ಗ್ರಾಮ ಒನ್ / ಬೆಂಗಳೂರು ಒನ್ / ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪ್ರತಿ ತಿಂಗಳು 25 ರಂದು ಅಥವಾ ಮೊದಲು ನಿರುದ್ಯೋಗ ಸ್ವಯಂ ಘೋಷಣೆಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಯುವನಿಧಿ ಯೋಜನೆಯ ಷರತ್ತು ಹಾಗೂ ನಿಬಂಧನೆಗಳು

ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗಳಿಸಲಾಗುವುದು.

ಇದನ್ನೂ ಓದಿ Gruhalakshmi scheme ಹಣ ಈ ಮಹಿಳೆಯರಿಗೆ ಜಮೆ

ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲಾಗುವುದು. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಸದ್ಯ ಅರ್ಜಿ ಕರೆದಿಲ್ಲ. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಯೋಜನೆಗೆ ಯಾರು ಅರ್ಹರಾಗಿರುವುದಿಲ್ಲ

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿಧ್ಯಾಭ್ಯಾಸ ಮುಂದವರೆಸುವವರು. ಶಿಶಿಕ್ಷು (ಅಪ್ರೆಂಟಿಸ್) ವೇತನವನ್ನು ಪಡೆಯುತ್ತಿರುವುವವರು ಅರ್ಹರಾಗಿರುವುದಿಲ್ಲ. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು ಸಹ ಯೋಜನೆಗೆ ಅರ್ಹರಾಗಿರುವುದಿಲ್ಲ. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

Leave a Comment