ಕರ್ನಾಟಕ ಯುವ ನಿಧಿ ಯೋಜನೆಯಡಿಯಲ್ಲಿ ಯಾರು ಯಾರಿಗೆ ನಿರುದ್ಯೋಗ ಭತ್ಯೆ ಸಿಗಲಿದೆ? ಇದಕ್ಕೆ ಇರುವ ಷರತ್ತುಗಳೇನು? ಅರ್ಹತೆಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಹೌದು, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಯುವನಿಧಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಆ ಯೋಜನೆಗಳಡಿಯಲ್ಲಿ ನೋಂದಣಿ ಮಾಡಿಕೊಂಡ ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದಾರೆ.
ಏನಿದು ಕರ್ನಾಟಕ ಯುವ ನಿಧಿ ಯೋಜನೆ?
ಕರ್ನಾಟಕ ಯುವ ನಿಧಿ ಯೋಜನೆಯನ್ನು ರಾಜ್ಯದ ಪದವೀಧರ / ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ನಿರುದ್ಯೋಗ ಭತ್ಯೆ ನೀಡಲು ಈ ಯೋಜನೆಯನ್ನು ಘೋಷಣೆ ಮಾಡಿದೆ.
2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿಗಳು ಮಾತ್ರ) ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದುನೂರು ರೂಪಾಯಿಗಳು ಮಾತ್ರ) ರಂತೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವು ಈಗಾಗಲೇ ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.
ಇದನ್ನೂ ಓದಿ : ನಿಮ್ಮ ಜಮೀನು ಯಾರ ಹೆಸರಿಗೆ ಎಷ್ಟು ಎಕರೆ ಜಂಟಿ ಇದೆ? ಇಲ್ಲೇ ಚೆಕ್ ಮಾಡಿ
ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಸಲು ಕೆಲವು ಷರತ್ತು ಹಾಗೂ ನಿಬಂಧನೆಗಳನ್ನು ಹಾಗೂ ಅನರ್ಹತೆಯ ಮಾನದಂಡಗಳ್ು ವಿಧಿಸಿ ಆದೇಶ ಹೊರಡಿಸಲು ಸರ್ಕಾರ ತೀರ್ಮಾನಿಸಿದೆ.
2023 ರ ವರ್ಷದಲ್ಲಿ ತೇರ್ಗಡೆಯಾಗಿ., ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದೆಯಿರುವ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ಗಗಳು ಸೇರಿದಂತೆ) ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿ ಮಾತ್ರ) ನಿರುದ್ಯೋಗ ಭತ್ತೆ ನೀಡಲಾಗುವುದು. ಅದೇ ರೀತಿ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದನೂರು ರೂಪಾಯಿಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರಿಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ.
ಯುವನಿಧಿ ಯೋಜನೆಯ ಷರತ್ತು ಹಾಗೂ ನಿಬಂಧನೆಗಳು
ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗಳಿಸಲಾಗುವುದು. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲಾಗುವುದು. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಯೋಜನೆಗೆಯಾರು ಅರ್ಹರಾಗಿರುವುದಿಲ್ಲ
ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿಧ್ಯಾಭ್ಯಾಸ ಮುಂದವರೆಸುವವರು. ಶಿಶಿಕ್ಷು (ಅಪ್ರೆಂಟಿಸ್) ವೇತನವನ್ನು ಪಡೆಯುತ್ತಿರುವುವವರು ಅರ್ಹರಾಗಿರುವುದಿಲ್ಲ. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು ಸಹ ಈ ಯೋಜನೆಗೆ ಅರ್ಹರಾಗಿರುವುದಿಲ್ಲ. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.