Yuvanidhi scheme ಯಡಿ 3 ಸಾವಿರ ಜಮೆ ಸ್ಟೇಟಸ್ ಚೆಕ್ ಮಾಡಿ

Written by Ramlinganna

Updated on:

Yuvanidhi scheme ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಹಾಗೂ ಕೊನೆಯ ಗ್ಯಾರೆಂಟಿ ಯುವನಿಧಿಗೆ ಈಗಾಗಲೇ ಚಾಲನೆ ನೀಡಲಾಗುತ್ತಿದೆ.  ನೋಂದಣಿ ಮಾಡಿಸಿದ ನಿರುದ್ಯೋಗಿಗಳಿಗೆ ಹಣ ಜಮೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ ಹಾಗಾಗಿ ಫಲಾನುಭವಿಗಳ ಒಮ್ಮೆ ತಮ್ಮ ಖಾತೆಯಲ್ಲಿ ಹಣ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಲು ಕೋರಲಾಗಿದೆ.

ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ಮಾಸಿಕ1500 ರೂಪಾಯಿ ನೀಡಲಾಗುವುದು.

ಇದನ್ನೂ ಓದಿ ನಿಮ್ಮ ಎಲ್ಐಸಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ? ಇಲ್ಲಿದೆ ಮಾಹಿತಿ

ಯುವ ನಿಧಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 5.29 ಲಕ್ಷ ವಿದ್ಯಾರ್ಥಿಗಳ ನೋಂದಣಿ ಟಾರ್ಗೆಟ್ ಇದೆ. ಈವರೆಗೆ 61 ಸಾವಿರ ವಿದ್ಯಾರ್ಥಿಗಳು ಯೋಜನೆಗೆ ನೋಂದಣಿ ಮಾಡಿಸಿದ್ದಾರೆ.

ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ವಿದ್ಯಾರ್ಥಿಗಳು ನೋಂದಣಿ ಮಾಡುತ್ತಿದ್ದು, ನೋಂದಣಿ ಮಾಡಿದವರಿಗೆ ಹೆಚ್ಚುವರಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ.

Yuvanidhi scheme ಗೆ ನೋಂದಣಿ ಮಾಡಲು ಈ

https://sevasindhugs.karnataka.gov.in

ಲಿಂಕ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

Yuvanidhi scheme ಯ ಷರತ್ತು ಹಾಗೂ ನಿಬಂಧನೆಗಳು

ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗಳಿಸಲಾಗುವುದು. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲಾಗುವುದು.

ಏನಿದು Yuvanidhi scheme ?

ಕರ್ನಾಟಕ ಯುವ ನಿಧಿ ಯೋಜನೆಯನ್ನು ರಾಜ್ಯದ ಪದವೀಧರ / ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ನಿರುದ್ಯೋಗ ಭತ್ಯೆ ನೀಡಲು ಈ ಯೋಜನೆಯನ್ನು ಘೋಷಣೆ ಮಾಡಿದೆ.

2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿಗಳು ಮಾತ್ರ) ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದುನೂರು ರೂಪಾಯಿಗಳು ಮಾತ್ರ) ರಂತೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವು ಈಗಾಗಲೇ ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.

Yuvanidhi scheme  ಯೋಜನೆಯ ಕೆಲವು ಷರತ್ತು ಹಾಗೂ ಅರ್ಹತೆಯ ಮಾನದಂಡಗಳ ಮಾಹಿತಿ

2023  ರ ವರ್ಷದಲ್ಲಿ ತೇರ್ಗಡೆಯಾಗಿ. ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದೆಯಿರುವ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ಗಗಳು ಸೇರಿದಂತೆ) ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿ ಮಾತ್ರ) ನಿರುದ್ಯೋಗ ಭತ್ತೆ ನೀಡಲಾಗುವುದು. ಅದೇ ರೀತಿ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದನೂರು ರೂಪಾಯಿಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರಿಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ.

Leave a Comment