ಯುವನಿಧಿ ಯೋಜನೆಗೆ ಈ ತಿಂಗಳ ನೋಂದಣಿ ಶುರು: ಈ ಯುವಕರಿಗೆ ಹಣ ಜಮೆ?

Written by Ramlinganna

Published on:

ನಿರುದ್ಯೋಗಿ ಯುವಕರಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ಸಿಗಲಿದೆ. ಹೌದು, ಕಾಂಗ್ರೆಸ್ ಸರ್ಕಾರವು ಐದು ಗ್ಯಾರೆಂಟಿಗಳಲ್ಲಿ ಕೊನೆಯದಾದ ಯುವನಿಧಿ ಯೋಜನೆಗೆ ಜನವರಿಯಲ್ಲಿ ಚಾಲನೆ ಸಿಗಲಿದೆ.

ಡಿಸೆಂಬರ್ ತಿಂಗಳಾಂತ್ಯಕ್ಕೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷವು ಈಗಾಗಲೇ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ನಾಲ್ಕು ಯೋಜನೆಗಳ ಅಡಿಯಲ್ಲಿ ರಾಜ್ಯದ ಜನತೆ ಸೌಲಭ್ಯ ಪಡೆಯುತ್ತಿದ್ದಾರೆ. ಇದೀಗ ಐದನೇ ಗ್ಯಾರೆಂಟಿ ಯೋಜನೆ ಯುವನಿಧಿ ಜಾರಿಗೆ ತರಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಲಾಗಿವೆ. ಡಿಸೆಂಬರ್ ತಿಂಗಳಕ್ಕೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಜನವರಿಯಲ್ಲಿ ಯೋಜನೆ ಅಧಿಕೃತವಾಗಿ ಚಾಲನೆ ಸಿಗಲಿದೆ.

ಹೌದು, ಯೋಜನೆ ನೋಂದಗಣಿ, ಸಹಾಯಧನ ಪಾವತಿ ಸೇರಿದಂತೆ ಇತರ ವಿವರ ನೀಡಲು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸರ್ಕಾರದ ಅಂದಾಜಿನಂತೆ 5 ಲಕ್ಷ ಯುವಕ ಯುವತಿಯರಿಗೆ ಈ ಯೋಜನೆಯ ಲಾಭ ಸಿಗಲಿದೆ.

ಏನಿದು ಕರ್ನಾಟಕ ಯುವ ನಿಧಿ ಯೋಜನೆ?

ಕರ್ನಾಟಕ ಯುವ ನಿಧಿ ಯೋಜನೆಯನ್ನು ರಾಜ್ಯದ ಪದವೀಧರ / ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ನಿರುದ್ಯೋಗ ಭತ್ಯೆ ನೀಡಲು ಈ ಯೋಜನೆಯನ್ನು ಘೋಷಣೆ ಮಾಡಿದೆ.

ಇದನ್ನು ಓದಿ ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ಸಾಲಮನ್ನಾ ಸ್ಟೇಟಸ್ ಚೆಕ್ ಮಾಡಿ

2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿಗಳು ಮಾತ್ರ) ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದುನೂರು ರೂಪಾಯಿಗಳು ಮಾತ್ರ) ರಂತೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವು ಈಗಾಗಲೇ ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.

ಯುವ ನವಿಧಿ ಯೋಜನೆಯ ಕೆಲವು ಷರತ್ತು ಹಾಗೂ ಅರ್ಹತೆಯ ಮಾನದಂಡಗಳ ಮಾಹಿತಿ

2023  ರ ವರ್ಷದಲ್ಲಿ ತೇರ್ಗಡೆಯಾಗಿ. ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದೆಯಿರುವ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ಗಗಳು ಸೇರಿದಂತೆ) ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿ ಮಾತ್ರ) ನಿರುದ್ಯೋಗ ಭತ್ತೆ ನೀಡಲಾಗುವುದು. ಅದೇ ರೀತಿ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದನೂರು ರೂಪಾಯಿಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರಿಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ.

ಯುವನಿಧಿ ಯೋಜನೆಯ ಷರತ್ತು ಹಾಗೂ ನಿಬಂಧನೆಗಳು

ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗಳಿಸಲಾಗುವುದು. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲಾಗುವುದು. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಸದ್ಯ ಅರ್ಜಿ ಕರೆದಿಲ್ಲ.  ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಯೋಜನೆಗೆಯಾರು ಅರ್ಹರಾಗಿರುವುದಿಲ್ಲ

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿಧ್ಯಾಭ್ಯಾಸ ಮುಂದವರೆಸುವವರು. ಶಿಶಿಕ್ಷು (ಅಪ್ರೆಂಟಿಸ್) ವೇತನವನ್ನು ಪಡೆಯುತ್ತಿರುವುವವರು ಅರ್ಹರಾಗಿರುವುದಿಲ್ಲ. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು ಸಹ ಈ ಯೋಜನೆಗೆ ಅರ್ಹರಾಗಿರುವುದಿಲ್ಲ. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಒಂದು ವೇಳೆ 2 ವರ್ಷದೊಳಗೆ ಉದ್ಯೋಗ ದೊರೆತರೆ ಅವರನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗಿಡಲಾಗುತ್ತದೆ.

Leave a Comment