ಬಡ್ಡಿಯಿಲ್ಲದೆ 5 ಲಕ್ಷ ಸಾಲ ಬೇಕೇ? ಇಲ್ಲಿ ಅರ್ಜಿ ಸಲ್ಲಿಸಿ

Written by Ramlinganna

Updated on:

zero interest crop loan ರಾಜ್ಯದ ಡಿಸಿಸಿ ಬ್ಯಾಂಕ್ ಹಾಗೂ ಸಹಕಾರ ಸಂಘಗಳಲ್ಲಿ ನಿಮಗೆ ಬಡ್ಡಿಯಿಲ್ಲದೆ 5 ಲಕ್ಷ ರೂಪಾಯಿಯವರೆಗೆ ಸಾಲ ಬೇಕೇ? ಇಲ್ಲಿ ಅರ್ಜಿ ಸಲ್ಲಿಸಿ ಬೆಳೆ ಸಾಲ ಪಡೆದುಕೊಳ್ಳಬಹುದು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಂದ19.97 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 15,841.48 ಕೋಟಿ ರೂಪಾಯಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗಿದೆ. ಕಳೆದ ಅವಧಿಗಿಂತ ಈ ಬಾರಿ 776.48 ಕೋಟಿ ಹೆಚ್ಚುವರಿ ಸಾಲ ವಿತರಿಸಲಾಗಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರ ರೈತರ ಪರವಾದ ಸರ್ಕಾರವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ ಗೂಳಿಗೌಡ ಹೇಳಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ 21 ಡಿಸಿಸಿ ಬ್ಯಾಂಕ್ ಹಾಗೂ 6040 ಕೃಷಿ ಪತ್ತಿನ ಸಹಕಾರ ಸಂಘಗಳಿಂದ 24600ಕೋಟಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿತ್ತು. ಅದರಲ್ಲಿ ಜನವರಿಯವರೆಗೆ 19.97 ಲಕ್ಷ ರೈತರಿಗೆ 15,841.48 ಕೋಟಿ ಸಾಲ ನೀಡಲಾಗಿದೆ. ಕಳೆದ ಅವಧಿಗಿಂತ ಹೆಚ್ಚುವರಿಯಾಗಿ 776.48 ಕೋಟಿ ಸಾಲ ನೀಡಲಾಗಿದೆ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ರಾಜ್ಯ ರೈತರಿಗೆ 5 ಲಕ್ಷ ರೂಪಾಯಿಯವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. 20 ಲಕ್ಷದವರೆಗೆ ಶೇ. 3 ರ ಬಡ್ಡಿ ದರದಲ್ಲಿ ಕೃಷಿ ಸಾಲ ವಿತರಣೆ ನಡೆಯುತ್ತಿದೆ.

zero interest crop loan ಶೂನ್ಯ ಬಡ್ಡಿದರದ ಸಾಲ ಎಲ್ಲಿ ಸಿಗುತ್ತದೆ?

ಐದು ಲಕ್ಷ ರೂಪಾಯಿಯವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಡಿಸಿಸಿ ಬ್ಯಾಂಕ್ ಹಾಗೂ ಸಹಕಾರ ಸಂಘಗಳಲ್ಲಿ ಸಿಗುತ್ತದೆ. ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ರೈತರಿಗೆ ಸಾಲ ನೀಡಲಾಗುವದು.

ಗುರಿ ನಿಗದಿ ಮಾಡಿ ಸಾಲ ವಿತರಣೆ ಮಾಡುವುದಕ್ಕಿಂತ, ರೈತರ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ರೈತರಿಗೆ ಸಾಲ ವಿತರಣೆ ಮಾಡಲು ಆದ್ಯತೆ ನೀಡಲಾಗುತ್ತಿದೆ.

ಇದನ್ನೂ ಓದಿ ಗ್ರಾಮ ಪಂಚಾಯತ್ ಮಾಹಿತಿ whatsapp ನಲ್ಲಿ ಹೀಗೆ ಪಡೆಯಿರಿ

ಈ ಹಿಂದೆ ಅಲ್ಪಾವಧಿ ಕೃಷಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ದವರೆಗೆ ನೀಡಲಾಗುತ್ತಿತ್ತು. ಇನ್ನೂ ಮುಂದೆ 5 ಲಕ್ಷದವರೆಗೆ ನೀಡಲಾಗುವುದು. ಅದೇ ರೀತಿ ಶೇ. 3 ರ ಬಡ್ಡಿ ದರದಲ್ಲಿ ನೀಡುತ್ತಿದ್ದ ಸಾಲವನ್ನು 20 ಲಕ್ಷಕ್ಕೆ ಹೆಚ್ಚಿಸಲಾಗುವುದು. ಈ ಅಂಶವನ್ನು ಪ್ರಣಾಳಿಕೆಯಲ್ಲಿಯೂ ಹೇಳಲಾಗಿತ್ತು. ಈ ಭರವಸೆಯನ್ನು ಪ್ರಸಕ್ತ ಮುಂಗಾರು ಹಂಗಾಮಿನಲ್ಲೇ ಜಾರಿಗೊಳಿಸಿ ಅರ್ಹ ರೈತರಿಗೆ ಸಾಲ ನೀಡಲಾಗುತ್ತಿದೆ.

ಕೃಷಿ ಸಾಲ ನೀಡಿಕೆಯನ್ನು ಪ್ರತಿ ವರ್ಷ ಶೇ. 10 ಅಥವಾ ಶೇ. 20 ಹೆಚ್ಚಿಸುವುದರ ಬದಲು ಹೆಚ್ಚಿನ ಅರ್ಹ ರೈತರಿಗೆ ಸಾಲ ಕೊಡಲು ಆದ್ಯತೆ ನೀಡಲಾಗುತ್ತಿದೆ.. ಸಾಮಾನ್ಯವಾಗಿ ರೈತರಿಗೆ ಗುರಿ ಮೀರಿ ಸಾಲ ನೀಡಲಾಗುತ್ತಿದೆ. ಕಳೆದ ವರ್ಷ12 ಸಾವಿರ ಕೋಟಿ ರೂಪಾಯಿ ಸಾಲ ನೀಡುವ ಗುರಿ ಹೊಂದಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ ರೈತರಿಗೆ ಸಾಲ ವಿತರಣೆಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.

2018 ರಲ್ಲಿ ಯಾರು ಯಾರಿಗೆ ಬೆಳೆ ಸಾಲಮನ್ನಾ ಆಗಿದೆ? ಮೊಬೈಲ್ ನಲ್ಲಿ ಚೆಕ್ ಮಾಡಿ

2018 ರಲ್ಲಿ ಯಾವ ಯಾವ ರೈತರ ಬೆಳೆ ಸಾಲಮನ್ನಾ ಆಗಿದೆ ಎಂಬುದನ್ನು ರೈತರು ಚೆಕ್ ಮಾಡಲು ಈ

https://clws.karnataka.gov.in/clws/pacs/citizenreport/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಆಧಾರ್ ಕಾರ್ಡ್ ನಂಬರ್, ರೇಶನ್ ಕಾರ್ಡ್ ನಂಬರ್ ಹೀಗೆ ಎರಡು ಆ?್ಕೆಗಳು ಕಾಣಿಸುತ್ತವೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ Fetch Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನ್ನೊಂದು ರಿಪೋರ್ಟ್ ಓಪನ್ ಆಗುತ್ತದೆ.

ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು, ನೀವು ಯಾವ ಬ್ಯಾಂಕಿನಲ್ಲಿ ಬೆಳೆ ಸಾಲ ಪಡೆದಿದ್ದೀರಿ? ಯಾವ ಬ್ರ್ಯಾಂಚ್ ನಲ್ಲಿ ಬೆಳೆ ಸಾಲ ಪಡೆದಿದ್ದೀರಿ ಎಂಬ ಮಾಹಿತಿ ಕಾಣಿಸುತ್ತದೆ. ನಂತರ ನಿಮ್ಮ ಹೆಸರು, ತಂದೆಯಹೆಸರು ಕಾಣಿಸುತ್ತದೆ. ನಂತರ ನಿಮ್ಮ ಬ್ಯಾಂಕಿನ ಅಕೌಂಟ್ ನಂಬರ್ ಕಾಣಿಸುತ್ತದೆ. 31-12-2017 ರವರೆಗೆ ನಿಮ್ಮ ಹೆಸರಿಗೆ ಎಷ್ಟು ಬೆಳೆ ಸಾಲವಿತ್ತು ಎಂಬುದು ಕಾಣಿಸುತ್ತದೆ. ನಂತರ ನಿಮಗೆ ಎಷ್ಟು ಕಂತುಗಳಲ್ಲಿಬೆಳೆ ಸಾಲಮನ್ನಾ ಆಗಿದೆ ಅಂದರ ನಿಮಗೆ ಎಷ್ಟು ಕಂತುಗಳಲ್ಲಿ ಹಣ ಬಿಡುಗಡೆಯಾಗಿದೆ? ಎಷ್ಟುಹಣ ನಿಮ್ಮ ಖಾತೆಗೆ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಯಾವ ದಿನಾಂಕದಂದು ಹಣ ಬಿಡುಗಡೆಯಾಗಿದೆ ಎಂಬ ಮಾಹಿತಿ ಇರುತ್ತದೆ.

Leave a Comment